Kalaburagi ಬ್ರೇಕಿಂಗ್ ನ್ಯೂಸ್
ಕೇಂದ್ರ ಸರ್ಕಾರವನ್ನು ಬದಲಿಸಿ: ಸಿಎಂ

ಮಹಿಪಾಲರೆಡ್ಡಿ
ಪ್ರಧಾನ ಸಂಪಾದಕರು
ಶುಕ್ರವಾರ, ಸೆಪ್ಟೆಂಬರ್ 18, 20262 ನಿಮಿಷ ಓದು13 ವೀಕ್ಷಣೆಗಳು

ಪೂರ್ಣಚಿತ್ರ ವೀಕ್ಷಿಸಲು ಕ್ಲಿಕ್ ಮಾಡಿ
Ads
ಕಲಬುರ್ಗಿ, ಸೆ.೧೭- ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಸಮಗ್ರ ಅಭಿವೃದ್ಧಿಯನ್ನು ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಬದಲಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಗರದ ಪೋಲಿಸ್ ಪರೇಡ್ ಮೈದಾನದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ರಾಷ್ಟçಧ್ವಜಾರೋಹಣ ನೆರವೇರಿಸಿ, ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿ ಕೇವಲ ಕಾಂಗ್ರೆಸ್ ಪಕ್ಷದಿಂದ ಆಗಿದೆ. ಹೈದ್ರಾಬಾದ್ ಕರ್ನಾಟಕದ ವಿಮೋಚನೆಗೂ ಕಾಂಗ್ರೆಸ್ ಕಾರಣವಾಗಿದೆ. ಅಭಿವೃದ್ಧಿಗೂ ಕಾಂಗ್ರೆಸ್ ಕಾರಣವಾಗಿದೆ. ನೀವು ನಮಗೆ ಕೈ ಹಿಡಿದಿದ್ದೀರಿ. ಹಾಗಾಗಿ ನಿಮ್ಮ ಕೈ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಇರುವಂತೆ ಕೇಂದ್ರದಲ್ಲೂ ಸಹ ಬದಲಾವಣೆಯನ್ನು ತರಬೇಕು ಎಂದರು.
ಕಲ್ಯಾಣ ಕರ್ನಾಟಕಕ್ಕೆ ೩೭೧(ಜೆ) ಕಲಂ ಮೀಸಲಾತಿ ಸೌಲಭ್ಯ ಜಾರಿಗೆ ತರಲು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಮುಂತಾದವರು ಕಾರಣರು. ಹೀಗಾಗಿ ಈ ಭಾಗದಲ್ಲಿ ಅಭಿವೃದ್ಧಿ ಪರ್ವ ಆಗಿದೆ. ಮಲ್ಲಿಕಾರ್ಜುನ್ ಖರ್ಗೆಯವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಅನೇಕ ರೈಲುಗಳನ್ನು ಆರಂಭಿಸಿದರು. ಈ ಭಾಗದಲ್ಲಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಿಸುವ ಮೂಲಕ ಆರೋಗ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ನೀವೆಲ್ಲರೂ ಮಲ್ಲಿಕಾರ್ಜುನ್ ಖರ್ಗೆ ಅವರ ಫೋಟೋ ಪೂಜೆ ಮಾಡಬೇಕು ಎಂದು ಅವರು ಕೊಂಡಾಡಿದರು.
ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನ ಕಾಪಾಡಿದರು. ಕಟ್ಟಡಗಳ ನಿರ್ಮಾಣದ ಜೊತೆಗೆ ಕಟ್ಟ ಕಡೆಯ ವ್ಯಕ್ತಿಯ ನೆಮ್ಮದಿ ಬದುಕೇ ಅಭಿವೃದ್ಧಿ ಈ ನಿಟ್ಟಿನಲ್ಲಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಸಿದ್ಧ ರಾಮಯ್ಯ ಅವರು ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆದರು ಎಂದರು.
ಟ್ಯಾಗ್ಸ್:#Sedam#Karnataka

ಮಹಿಪಾಲರೆಡ್ಡಿ
ಪ್ರಧಾನ ಸಂಪಾದಕರುಮೈನಾ ಸೇಡಂ ನ್ಯೂಸ್ (RNI/PRGI: KNKAN/25/A1528) ಸೇಡಂ ಮತ್ತು ಕಲ್ಯಾಣ ಕರ್ನಾಟಕದಾದ್ಯಂತ ಸತ್ಯನಿಷ್ಠ ಹಾಗೂ ಗ್ರಾಮೀಣ ಜನಪರ ಪತ್ರಿಕೋದ್ಯಮಕ್ಕೆ ಬದ್ಧವಾಗಿದೆ.
Ads