📅 ಮಂಗಳವಾರ, ಅಕ್ಟೋಬರ್ 6, 2026
Myna News Logo
ಮೈನಾ

ಸೇಡಂ

ನ್ಯೂಸ್

ಕನ್ನಡ ದಿನ ಪತ್ರಿಕೆ
Editor

ಪ್ರಧಾನ ಸಂಪಾದಕರು:

ಮಹಿಪಾಲರೆಡ್ಡಿ

Ads
Kalaburagi

ನಾಡಿಗೆ ಬೆಂಗಳೂರು ಕಿರೀಟ, ಕಲ್ಯಾಣ ಕರ್ನಾಟಕ ಶಕ್ತಿ ಪೀಠ

ದತ್ತ ಕ್ಷೇತ್ರ ಅಭಿವೃದ್ಧಿಗೆ ೫೦ ಕೋಟಿ

ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಶನಿವಾರ, ಸೆಪ್ಟೆಂಬರ್ 19, 20262 ನಿಮಿಷ ಓದು3 ವೀಕ್ಷಣೆಗಳು
ಸುದ್ದಿ ಹಂಚಿಕೊಳ್ಳಿ:
ನಾಡಿಗೆ ಬೆಂಗಳೂರು ಕಿರೀಟ, ಕಲ್ಯಾಣ ಕರ್ನಾಟಕ ಶಕ್ತಿ ಪೀಠ
ಪೂರ್ಣಚಿತ್ರ ವೀಕ್ಷಿಸಲು ಕ್ಲಿಕ್ ಮಾಡಿ
Ads
೫೦ ಕೋಟಿ ರೂ. ವೆಚ್ಚದಲ್ಲಿ ಗಾಣಗಾಪೂರ ಅಭಿವೃದ್ಧಿ: ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಮತ್ತು ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯ ಯಾತ್ರಾ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುವುದು. ಕೆಕೆಆರ್‌ಡಿಬಿ ಅನುದಾನದ ಮೂಲಕ ಮಳಖೇಡ, ನಾಗಾವಿ, ಕಾಳಗಿ ಮತ್ತು ಸನ್ನತಿಯ ಪಾರಂಪರಿಕ ತಾಣಗಳನ್ನೂ ಪುನರಾಭಿ ವೃದ್ಧಿಪಡಿಸಲಾಗುತ್ತಿದೆ. ಗಾಣಗಾಪುರವನ್ನು ಮೊದಲ ಹಂತದಲ್ಲಿ ೫೦ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಬಸವಣ್ಣನವರ ತತ್ವಗಳು ಮತ್ತು ವಚನ ಪರಂಪರೆಯನ್ನು ಯುವ ಪೀಳಿಗೆಗೆ ತಲುಪಿಸಲು ಕಲಬುರಗಿಯಲ್ಲಿ ವಚನ ಮಂಟಪವನ್ನು ಸ್ಥಾಪಿಸಲಾಗುವುದು. ಶಕ್ತಿ ಯೋಜನೆಯಡಿ ಮಹಿಳೆಯರು ೧೧೭.೬ ಕೋಟಿ ಟ್ರಿಪ್ ಉಚಿತ ಪ್ರಯಾಣ ಮಾಡಿದ್ದು ಇದಕ್ಕಾಗಿ ೪,೨೮೭ ಕೋಟಿ ವೆಚ್ಚ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ೨೧.೪೨ ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ₹೨,೩೨೮ ಕೋಟಿ ವಿನಿಯೋಗ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ೨೪.೭೮ ಲಕ್ಷ ಮಹಿಳೆಯರಿಗೆ ೯,೬೫೦ ಕೋಟಿ ವಿತರಿಸಲಾಗಿದೆ. ಯುವನಿಧಿ ಯೋಜನೆಗೆ ೧೭೨ ಕೋಟಿ ವೆಚ್ಚ ಮಾಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕು ಬದಲಾಯಿಸಿದೆ ಎಂದರು. ಪ್ರದೇಶದಲ್ಲಿ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಲು ೩೫೦ ಕೆಪಿಎಸ್ ಶಾಲೆಗಳ ನಿರ್ಮಾಣ ಮಾಡಲಾಗುತ್ತಿದೆ. ಸಣ್ಣ ಕೈಗಾರಿಕೆಗಳಿಗೆ ೨೦೦ ಕೋಟಿ ರೂ. ನೀಡಲಾಗಿದೆ. ೭,೨೦೦ ಕೋಟಿ ಅಂದಾಜು ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ-ಬೀದರ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ಸುಧಾರಣೆಗೆ ಕಲ್ಯಾಣ ಪಥ ಯೋಜನೆಯಡಿ ೧,೦೦೦ ಕೋಟಿ ರೂ. ವೆಚ್ಚದಲ್ಲಿ ೧೦೫೦ ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಯುವಕರಲ್ಲಿ ನಾಯಕತ್ವ ಗುಣ ಬೆಳೆಸಬೇಕು ಮತ್ತು ಅವರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ದೃಷ್ಠಿಯಿಂದ ೧೦ ಸಾವಿರ ಭಾರತ ಜೋಡೋ ಸಂಘ ರಚಿಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿ ವರೆಗೆ ಯುವಕರ ಪ್ರತಿಭೆ ಹೊರತರಲು ಮತ್ತು ಸಂಘಟನಾತ್ಮಕವಾಗಿ ಯುವ ಶಕ್ತಿ ಬಲಿಷ್ಟಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಸಿ.ಎಂ. ಹೇಳಿದರು. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗಿದೆ. ಇಂದಿರಾ ಗಾಂದಿ ಮಕ್ಕಳ ಆಸ್ಪತ್ರೆ, ಕಿದ್ವಾಯಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಅನೇಕ ಆರೋಗ್ಯ ಸಂಸ್ಥೆಗಳು ಪ್ರಗತಿಯಲ್ಲಿವೆ. ಇದಲ್ಲದೆ ಯಾದಗಿರಿ, ಕೊಪ್ಪಳ, ಬೀದರನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಆರೋಗ್ಯ ಆವಿಷ್ಕಾರದಡಿ ೧,೭೯೭ ಕೋಟಿ ರೂ. ಒದಗಿಸುವ ಮೂಲಕ ಕಲಬುರಗಿ ಕೇಂದ್ರಿತವಾಗಿ ಕಲ್ಯಾಣ ಕರ್ನಾಟಕವನ್ನು ಮೆಡಿಕಲ್ ಹಬ್ ಮಾಡಲಾಗುತ್ತಿದೆ ಎಂದರು. ಕಲಬುರಗಿಯಲ್ಲಿ ೧೨೦ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳು ಕಂಪನಿಗಳು ಸ್ಥಾಪನೆ ಯಾಗುವ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಠಿಸುವ ಕೆಲಸವಾಗುತ್ತಿದೆ. ೨೦೩೦ರ ವೇಳೆಗೆ ೫೦೦ಕ್ಕೂ ಹೆಚ್ಚು ಸ್ಟಾರ್ಟ್ಅಪ್‌ಗಳÀ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (ಏಏಇಒ): ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಗೆ ವೇಗ ನೀಡಲು ಸರ್ಕಾರವು ಸೆಕ್ಷನ್ ೮ ಕಂಪನಿಯಾಗಿ ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ ಸ್ಥಾಪಿಸಲಿದೆ. ಈ ಮಿಷನ್ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಈ ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ. ಜೈವಿಕ ಆರ್ಥಿಕ ಮಿಷನ್ : ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ಮೂಲಕ ರೈತರ ಆದಾಯ ಹೆಚ್ಚಿಸಲು ಸರ್ಕಾರವು ಜೈವಿಕ ಆರ್ಥಿಕ ಮಿಷನ್ ಸ್ಥಾಪಿಸಲಿದೆ. ತೊಗರಿ ಬೇಳೆ, ಕಮಲಾಪುರ ಬಾಳೆಹಣ್ಣು, ಒಣದ್ರಾಕ್ಷಿ ಮತ್ತು ಸಿರಿಧಾನ್ಯಗಳು ಸೇರಿದಂತೆ ಈ ಪ್ರದೇಶದ ಪ್ರಮುಖ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಇದು ಒತ್ತು ನೀಡಲಿದೆ. ರಕ್ತಹೀನತೆ ವಿರುದ್ಧ ವಿಶೇಷ ಅಭಿಯಾನ: ಈ ಪ್ರದೇಶದಲ್ಲಿ ರಕ್ತಹೀನತೆಯ ಪ್ರಮಾಣವನ್ನು ಕಡಿಮೆ ಮಾಡಲು ಸರ್ಕಾರವು ಮುಂದಿನ ಎರಡು ವರ್ಷಗಳ ಕಾಲ ತಪಾಸಣೆ, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಿಶೇಷವಾಗಿ ಗರ್ಭಿಣಿಯರು, ಹದಿಹರೆಯದವರು ಹಾಗೂ ಹಾಲುಣಿಸುವ ತಾಯಂದಿರ ಮೇಲೆ ಹೆಚ್ಚಿನ ಗಮನ ಹರಿಸಲಾಗುವುದು. ಕಲಬುರಗಿ ನಗರದ ಮೂಲ ಸೌಕರ್ಯ: ವೇಗವಾಗಿ ಬೆಳೆಯುತ್ತಿರುವ ಕಲಬುರಗಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಸೇಡಂ ರಸ್ತೆಯ ರಿಂಗ್ ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಿಸಲಾಗುವುದು. ಹೊಸ ಪೆರಿಫೆರಲ್ ರಿಂಗ್ ರೋಡ್ ಕೂಡ ಯೋಜನೆಯಲ್ಲಿದ್ದು, ಅದರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಜೊತೆಗೆ ೩೦ ಕೋಟಿ ರೂ. ವೆಚ್ಚದಲ್ಲಿ ನಗರಕ್ಕೆ ಪ್ರಮುಖ ಹಸಿರು ಮತ್ತು ಸಾರ್ವಜನಿಕ ವಿಹಾರ ತಾಣವಾಗಿ ಹೊಸ ಕೆರೆ ಮತ್ತು ಮನರಂಜನಾ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗುವುದು. ಎಐ ಆಧಾರಿತ ಸಿಸಿಟಿವಿ ಜಾಲ:ಸಾವÀðಜನಿಕ ಸುರಕ್ಷತೆ, ಅಪರಾಧ ತಡೆ ಮತ್ತು ಸಂಚಾರ ನಿರ್ವಹಣೆಯನ್ನು ಬಲಪಡಿಸಲು ಕಲಬುರಗಿ ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಎಐ ಆಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗುವುದು. ತ್ಯಾಜ್ಯ ನಿರ್ವಹಣೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ನಾಗರಿಕ ಸೇವೆಗಳ ಮೇಲ್ವಿಚಾರಣೆಯಲ್ಲಿಯೂ ಈ ಜಾಲವನ್ನು ಬಳಸಲಾಗುವುದು. ೫೦,೦೦೦ ನಿವೇಶನ ಹಂಚಿಕೆ:ಸಮಗ್ರ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ನಮ್ಮ ಬದ್ಧತೆಯ ಭಾಗವಾಗಿ, ಕಲಬುರಗಿ ಜಿಲ್ಲೆಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ ೫೦,೦೦೦ ವಸತಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಇದಕ್ಕಾಗಿ ಸರ್ಕಾರಿ ಭೂಮಿ ಗುರುತಿಸುವ ಕಾರ್ಯ ನಡೆದಿದೆ. ಐಟಿ ಪಾರ್ಕ್ ಮತ್ತು ಏಖIಙಂ:ಐಟಿ ಮತ್ತು ನಾವೀನ್ಯತಾ ಕ್ಷೇತ್ರದ ಬೆಳವಣಿಗೆಯನ್ನು ಬೆಂಗಳೂರಿನಾಚೆಗೂ ವಿಸ್ತರಿಸಲು ಕಲಬುರಗಿಯಲ್ಲಿ ೩೦ ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು. ಜೊತೆಗೆ ನಾವೀನ್ಯತೆ, ಸ್ಟಾರ್ಟ್ಅಪ್‌ಗಳು ಮತ್ತು ಯುವ ಉದ್ಯಮಿಗಳನ್ನು ಉತ್ತೇಜಿಸಲು ಏಡಿiಥಿಚಿ-ಏಚಿಟಚಿbuಡಿಚಿgi ಖeseಚಿಡಿಛಿh Iಟಿಟಿovಚಿಣioಟಿ ಚಿಟಿಜ ಙouಣh ಂಛಿಛಿeಟeಡಿಚಿಣoಡಿ ಅನ್ನು ಸ್ಥಾಪಿಸಲಾಗುವುದು. ೫೦ ಕೋಟಿ ರೂ. ವೆಚ್ಚದಲ್ಲಿ ಗಾಣಗಾಪೂರ ಅಭಿವೃದ್ಧಿ: ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಮತ್ತು ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯ ಯಾತ್ರಾ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುವುದು. ಕೆಕೆಆರ್‌ಡಿಬಿ ಅನುದಾನದ ಮೂಲಕ ಮಳಖೇಡ, ನಾಗಾವಿ, ಕಾಳಗಿ ಮತ್ತು ಸನ್ನತಿಯ ಪಾರಂಪರಿಕ ತಾಣಗಳನ್ನೂ ಪುನರಾಭಿ ವೃದ್ಧಿಪಡಿಸಲಾಗುತ್ತಿದೆ. ಗಾಣಗಾಪುರವನ್ನು ಮೊದಲ ಹಂತದಲ್ಲಿ ೫೦ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಬಸವಣ್ಣನವರ ತತ್ವಗಳು ಮತ್ತು ವಚನ ಪರಂಪರೆಯನ್ನು ಯುವ ಪೀಳಿಗೆಗೆ ತಲುಪಿಸಲು ಕಲಬುರಗಿಯಲ್ಲಿ ವಚನ ಮಂಟಪವನ್ನು ಸ್ಥಾಪಿಸಲಾಗುವುದು. ಕ್ರೀಡಾ ಮೂಲಸೌಕರ್ಯ: ಮುಂದಿನ ಎರಡು ವರ್ಷಗಳಲ್ಲಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣವನ್ನು ಆಧುನಿಕ ಕ್ರೀಡಾ ಮೂಲಸೌಕರ್ಯದೊಂದಿಗೆ ಸಮಗ್ರವಾಗಿ ಪುನರಾಭಿವೃದ್ಧಿಪಡಿಸಲಾಗುವುದು. ಇಡೀ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅನುಕೂಲವಾಗುವಂತೆ ಕ್ರಿಕೆಟ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರವು ಕೆಎಸ್‌ಸಿಎ ಜೊತೆ ಒಡಂಬಡಿಕೆ ಮಾಡಿಕೊಳ್ಳಲಿದೆ. ಕ್ರೀಡಾ ಶ್ರೇಷ್ಟತೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಲಬುರಗಿ ತಾಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ “Sಠಿoಡಿಣs ಅiಣಥಿ” ಸ್ಥಾಪಿಸಲಾಗುವುದು. ವಿವಿಧ ಕ್ರೀಡೆಗಳಿಗೆ ಅಂತರಾಷ್ತ್ರೀಯ ಮಟ್ಟದ ಒಳಾಂಗಣ ಮತ್ತು ಹೊರಾಂಗಣ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಕೋಟಿ ವೃಕ್ಷ ಅಭಿಯಾನ: ಕಲ್ಯಾಣ ಭಾಗದಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಗಳನ್ನು ಎದುರಿಸುವ ಸಾಮರ್ಥ್ಯ ವನ್ನು ಬಲಪಡಿಸಲು ಮುಂದಿನ ಎರಡು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಕೋಟಿ ವೃಕ್ಷ ಅಭಿಯಾನ ಕೈಗೊಳ್ಳಲಾಗುವುದು. ಒಂದು ಕೋಟಿ ಗಿಡ ಗಳನ್ನು ನೆಟ್ಟು ಪೋಷಿಸುವ ಗುರಿಯಾಗಿದೆ. ೧೬ ತುಕಡಿಗಳಿಂದ ಪಥಸಂಚಲನ: ಪರೇಡ್ ಕಮಾಂಡರ್ ಡಿ.ಎ.ಆರ್ ಡಿವೈ.ಎಸ್.ಪಿ ಸುನೀಲ ಪರಪ್ಪ ಕೊಡ್ಲಿ ಮತ್ತು ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಅರ್ ಆರ್. ಆರ್.ಎಸ್.ಐ ಚಂದ್ರಶೇಖರ ನೇತೃತ್ವದಲ್ಲಿ ಡಿ.ಎ.ಆರ್., ಸಿ.ಎ.ಆರ್., ಸಿವಿಲ್ ಪುರುಷ ಪಡೆ ಕಲಬುರಗಿ ನಗರ, ಪೊಲೀಸ್ ತರಬೇತಿ ಮಹಾವಿದ್ಯಾಲಯ-೧, ೨ ಮತ್ತು ೩, ಕೆ.ಎಸ್.ಯ.ಎಸ್.ಎಫ್ ೩ನೇ ಪಡೆ ಧಾರವಾಡ, ಕೆ.ಎಸ್.ಆರ್.ಪಿ. ೬ನೇ ಪಡೆ, ಹೋಮಗಾರ್ಡ್ ಪಡೆ, ಕೆ.ಕೆ.ಆರ್.ಟಿ.ಸಿ ಪಡೆ, ಅರಣ್ಯ ಪಡೆ, ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ, ಪ್ರತಿಭಾನ್ವಿತ ಬಾಲಕೀಯರ ವಸತಿ ಶಾಲೆ, ಕಸ್ತೂರಿ ಬಾ ಗಾಂಧಿ ವಸತಿ ಶಾಲೆ, ಭೋಸ್ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಹಾಗೂ ಅಗ್ನಿ ಶಾಮಕ ದಳ ತಂಡ ಹೀಗೆ ೧೬ ತುಕಡಿಗಳು ಆಕರ್ಷಕ ಪಥಸಂಚಲನ ನಡೆಸಿದವು. ನಂತರ ಕಲಾ ನೇಷನ್ ಸಂಸ್ಥೆಯ ಭಜರಂಗಿ ಅವರ ತಂಡದಿAದ ಮೂಡಿಬಂದ ರಾಷ್ಟ್ರ ಭಕ್ತಿ ಮತ್ತು ನಾಡು ಸಂಸ್ಕೃತಿ ಪರಿಚಯಿಸುವ ನೃತ್ಯ ಸಭಿಕರನ್ನು ರಂಜಿಸಿತು. ಕಲಾವಿದ ವಿಲಾಸ್ ನಾಯಕ್ ಅವರಿಂದ ಲೈವ್ ಪೇಂಟಿAಗ್‌ನಲ್ಲಿ ಮೂಡಿಬಂದ ಜವಾಹರ್ ಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಚಿತ್ರ ಎಲ್ಲರನ್ನು ಹುಬ್ಬೆರಿಸುವಂತೆ ಮಾಡಿತು. ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಣ ಬಿ.ಆರ್.ಪಾಟೀಲ, ಸಂಸದ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಶಾಸಕರುಗಳಾದ ಎಂ.ವೈ. ಪಾಟೀಲ, ಡಾ. ಅವಿನಾಶ ಉಮೇಶ ಜಾಧವ, ಬಸವರಾಜ ಮತ್ತಿಮಡು, ಅಲ್ಲಮಪ್ರಭು ಪಾಟೀಲ, ಬಸಣ್ಣಗೌಡ ದದ್ದಲ, ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಶಾಸಕರುಗಳಾದ ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಭೀಮರಾವ ಪಾಟೀಲ, ಶ್ರೀ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರ ಪಾಲಿಕೆ ಮಹಾಪೌರ ಅಜ್ಮಲ್ ಅಹ್ಮದ್ ಗೋಲಾ, ಐ.ಜಿ.ಪಿ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ್, ಕೆ.ಕೆ.ಆರ್.ಡಿ. ಬಿ.ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಡಾ. ಬಿ. ಸುಶೀಲಾ, ಜೆಸ್ಕಾಂ ಎಂ.ಡಿ. ಶಶಿಧರ ಕುರೇರ್, ಡಿ.ಸಿ. ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಜಿಪಂ ಸಿ.ಇ.ಓ ರಾಹುಲ್ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಹಿರಿಯ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು, ಭಾಗವಹಿಸಿದ್ದರು. ಬೆಂಗಳೂರಿನ ಬಾನೂಮತಿ, ಶಿಕ್ಷಕಿ ಸುಜಾತಾ ಪಾಟೀಲ ಮತ್ತು ಉಪನ್ಯಾಸಕ ಬಿ.ಎಚ್.ನಿರಗುಡಿ ನಿರೂಪಿಸಿದರು.
ಟ್ಯಾಗ್ಸ್:#Sedam#Karnataka
ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಮೈನಾ ಸೇಡಂ ನ್ಯೂಸ್ (RNI/PRGI: KNKAN/25/A1528) ಸೇಡಂ ಮತ್ತು ಕಲ್ಯಾಣ ಕರ್ನಾಟಕದಾದ್ಯಂತ ಸತ್ಯನಿಷ್ಠ ಹಾಗೂ ಗ್ರಾಮೀಣ ಜನಪರ ಪತ್ರಿಕೋದ್ಯಮಕ್ಕೆ ಬದ್ಧವಾಗಿದೆ.

Ads